ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯ ಏಪ್ರಿಲ್ 21 ರವರೆಗೆ ವಿಸ್ತರಿಸಿದೆ.
ರನ್ಯಾ ರಾವ್, ಉದ್ಯಮಿ ತರುಣ್ ರಾಜು ಮತ್ತು ಆಭರಣ ವ್ಯಾಪಾರಿ ಸಾಹಿಲ್ ಜೈನ್ ಅವರು ದುಬೈನಿಂದ ಭಾರತಕ್ಕೆ 12.56 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪ ಹೊತ್ತಿದ್ದಾರೆ.
ಮಾರ್ಚ್ 3, 2025 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಯಿಂದ 14.8 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿತ್ತು.