ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರನ್ಯಾರಾವ್ ಮತ್ತು ಸಂಗಡಿಗರು 1 ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.
ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ.
ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ.
ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ.