ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡ್ ಸ್ಮಗ್ಲಿಂಗ್ ಕೇಸ್ ಅಲ್ಲಿ ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿದೆ.
ಈ ವೇಳೆ ವಾದ, ಪ್ರತಿವಾದವನ್ನು ಆಲಿಸಿದ ಕೋರ್ಟ್ ಮಾರ್ಚ್.14ಕ್ಕೆ ಜಾಮೀನು ಅರ್ಜಿಯ ಆದೇಶದ ತೀರ್ಪು ಕಾಯ್ದಿರಿಸಿದೆ.
ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ.ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು.