ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ ನಟಿ ರನ್ಯಾರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿತು.
ವಿಚಾರಣೆಯ ಬಳಿಕ ಡಿಆರ್‌ಐ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ಮಾರ್ಚ್ 21ರಂದು ವಿಚಾರಣೆ ಮುಂದೂಡಿತು.
ಇಂದು ನಟಿ ರನ್ಯಾ ರಾವ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು DRI ಕಾಲಾವಕಾಶ ಕೋರಿ ಮನವಿ ಮಾಡಿತು. ಈ ವೇಳೆ ಕೋರ್ಟ್ ಆಕ್ಷೇಪಣೆ ಸಲ್ಲಿಸಲು DRI ಗೆ ಅನುಮತಿ ನೀಡಿತು. ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.