ವಿಮಾನ ನಿಲ್ದಾಣದಲ್ಲಿ 3.8 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶ:ವ್ಯಕ್ತಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಾರ್ಜಾದಿಂದ ಕೊಯಮತ್ತೂರ್‌ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 11 ಪ್ರಯಾಣಿಕರನ್ನು ತಡೆಹಿಡಿಯಲಾಗಿದ್ದು, ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ 3.8 ಕೋಟಿ ಮೌಲ್ಯದ 6.62 ಕಿಲೋಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬನನ್ನು ಕೊಯಮತ್ತೂರು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ.

“ವಿದೇಶಿ ಮೂಲದ ಚಿನ್ನದ ಒಟ್ಟು ಪ್ರಮಾಣ ಸುಮಾರು 3.8 ಕೋಟಿ ಮೌಲ್ಯದ 6.62 ಕೆಜಿ ವಶಪಡಿಸಿಕೊಳ್ಳಲಾಗಿದೆ” ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಅರ್ಜುನನ್ (43) ಎಂದು ಗುರುತಿಸಲಾಗಿದ್ದು, ಆತ ಕಲ್ಲಕುರಿಚಿ ಜಿಲ್ಲೆಯವನು. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!