ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್‌ಗಪ್ಪಾ ರುಚಿಯನ್ನು ಹೆಚ್ಚಿಸಲು ಅದಕ್ಕೆ ಶೌಚಾಲಯ ಸ್ವಚ್ಛಗೊಳಿಸಲು ಬಳಸುವ ಹಾರ್ಪಿಕ್ ಮತ್ತು ಯೂರಿಯಾ ಗೊಬ್ಬರ ಬಳಸಿದ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದ್ದು ಗ್ರಾಹಕರಿಗೆ ಶಾಕ್ ನೀಡಿದೆ.
ಜಾರ್ಖಂಡ್‌ನ ಗರ್ವ್ಹಾದಲ್ಲಿ ಕೆಲ ವ್ಯಕ್ತಿಗಳು ಇಂಥದ್ದೊಂದು ಕೃತ್ಯ ಎಸಗುತ್ತಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ವ್ಯಕ್ತಿಗಳು ಗೋಲ್‌ಗಪ್ಪಾ ತಯಾರಿಸಲು ಬಳಸುವ ಹಿಟ್ಟನ್ನು ಕಾಲಿನಲ್ಲಿ ತುಳಿಯುತ್ತಾ ಇದ್ದಿದ್ದು ಕಂಡುಬಂದಿದೆ. ವಿಚಾರಣೆ ವೇಳೆ ಗೋಲ್‌ಗಪ್ಪಾ ರುಚಿ ಹೆಚ್ಚಿಸಲು ಅದಕ್ಕೆ ಯೂರಿಯಾ ಮತ್ತು ಹಾರ್ಪಿಕ್ ಬಳಸಿದ್ದನ್ನು ಒಪ್ಪಿಕೊಂಡಿದ್ದಾರೆ.
ಹೊರಗಿನ ಫಾಸ್ಟ್‌ಫುಡ್ ತಿನ್ನುವ ಬದಲು ಪ್ರತಿ ಪದಾರ್ಥವನ್ನು ಕೂಡ ಮನೆಯಲ್ಲೇ ತಯಾರಿಸಿ, ಇದರಿಂದ ರುಚಿಯೂ ಚೆನ್ನಾಗಿರುತ್ತದೆ. ಆರೋಗ್ಯವೂ ಕೆಡುವುದಿಲ್ಲ.