ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಇನ್ನು ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದೆ. ಇನ್ನು ಸಿಆರ್‌ಎಸ್ ತನಿಖೆಯ ಹೊರತಾಗಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.