ಹೊಸದಿಗಂತ ವರದಿ, ಕೊಡಗು:
ಗೋಣಿಕೊಪ್ಪ ನಗರ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದ್ದು, ಪ್ರಭಾವಿ ಮುಖಂಡ ಬಿ.ಎನ್. ಪ್ರಕಾಶ್ ಹಾಗೂ ಸಂಗಡಿಗರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಗೋಣಿಕೊಪ್ಪ ಗ್ರಾಮ ಪಂಚಾಯತ್ ಗೆ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ನಗರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಗೋಣಿಕೊಪ್ಪದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರ ಸಮ್ಮುಖದಲ್ಲಿ ಬಿ.ಎನ್.ಪ್ರಕಾಶ್ ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡರು.
ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲಿ ಒಮ್ಮತದ ಕೊರತೆ ಕಾಡುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ.
ಪರಿಣಾಮವಾಗಿ ಗ್ರಾಮ ಪಂಚಾಯತ್ ಹಾಲಿ ಸದಸ್ಯ ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮಸ್೯ನ ಪ್ರಧಾನ ಕಾರ್ಯದರ್ಶಿ ಬಿ.ಎನ್. ಪ್ರಕಾಶ್, ಮಾಜಿ ಸದಸ್ಯ ಜಲೀಲ್, ಸೌಮ್ಯ, ಬಾಲು ಪ್ರಮುಖರಾದ ಮಹರೂಫ್, ರಶೀದ್, ಥೋಮಸ್, ರಾಧಾ ಕೃಷ್ಣ, ಮಂಜು, ಪ್ರದೀಪ್, ಸಾಗರ್ ಮುಂತಾದವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.