ಹೊಸ ದಿಗಂತ ವರದಿ, ಹುಬ್ಬಳ್ಳಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಪೂರ್ಣ ಅವ ಮುಗಿಸುವುದರಲ್ಲಿ ಎರಡು ಮಾತಿಲ್ಲ. ಮುಂದಿನ ಭಾರಿಯೂ ರಾಜ್ಯದಲ್ಲಿ ಬಿಜೆಪಿ ಅಕಾರಕ್ಕೆ ಬರಲಿದೆ ಎಂದರು. ಜನಸಾಮಾನ್ಯರಿಗೆ ತೊಂದರೆಯಾಗ ಬಾರದು ಎಂಬ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಕಡಿಮೆಗೊಳಿಸಿದೆ. ಅಂತಾರಾಷ್ಟ್ರೀಯ ಬೆಲೆಗಳನ್ನು ಗಮನದಲ್ಲಿಟ್ಟುಕೊಂಡು, ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದಲ್ಲಿ ಒಟ್ಟಾರೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಿದ್ದೇವೆ ಎಂದು ತಿಳಿಸಿದರು.