spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಮರ್ಥವಾಗಿ ಪಕ್ಷ ಕಟ್ಟಲು ಪ್ರಯತ್ನ: ಮಾಜಿ ಸಚಿವ ಈಶ್ವರಪ್ಪ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ವಿಜಯಪುರ:

ಯಡಿಯೂರಪ್ಪ ನವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಸಣ್ಣ ಪುಟ್ಟ ಗೊಂದಲಗಳಿತ್ತು. ಆದರೆ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಮರ್ಥವಾಗಿ ಪಕ್ಷ ಕಟ್ಟಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಪೂರ್ಣ ಬಹುಮತದಿಂದ ತರುವುದು ನಮ್ಮ ಗುರಿಯಾಗಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ‌್ ಅವರು ಸಂಘಟನೆ ಕಟ್ಟುವುದರಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯಲ್ಲಿ ಪಕ್ಷ ಏನು ಜವಾಬ್ದಾರಿ ಕೊಡುತ್ತದೆಯೋ ಆ ಕೆಲಸ ಮಾಡುವುದು ನಮ್ಮ ಕರ್ತವ್ಯ. ಹಿಂದೆ ನಾನು ಸಚಿವನಾಗಿದ್ದ ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಜವಾಬ್ದಾರಿ ವಹಿಸಲು ನನಗೆ ಹೇಳಿದರು, ಅದನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದರು.

ನಾನು ಸಿಎಂ, ನಾನು ಸಿಎಂ ಎಂದು ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹಾಗಿಲ್ಲ ಎಂದರು.

ಶಾಸಕ ಯತ್ನಾಳ ಅವರಿಗೆ ಕಳೆದ ಬಾರಿ ಕೂಡಾ ಹೇಳಿದ್ದೆ. ಬಹಿರಂಗವಾಗಿ ಹೇಳಿಕೆ ಕೊಟ್ಟು ಯತ್ನಾಳ ಹಾಳಾಗುತ್ತಿದ್ದಾರೆ. ಅವರು ನನಗೆ ಆತ್ಮೀಯ ಸ್ನೇಹಿತ ಹಿಂದುತ್ವವಾದಿ. ನನಗೆ ಖುಷಿಯಿದೆ, ಆದರೆ ಬಹಿರಂಗ ಹೇಳಿಕೆಗಳಿಂದ ಹಾಳಾಗುತ್ತಿದ್ದಾರೆ ಎಂದರು.

ಅವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲ ಆಗುತ್ತದೆ ಎಂದು ನನಗೇನು ಅನಿಸುವುದಿಲ್ಲ. ನಾಲ್ಕು ಗೋಡೆಗಳ ಮಧ್ಯ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ಕುರಿತು ನಾನು ಯತ್ನಾಳ ಅವರೊಂದಿಗೆ ಮಾತನಾಡುವೆ ಎಂದರು.

ಮಠಾಧೀಪತಿಗಳು ಅವರ ಶಿಷ್ಯಂದಿರ ಬಗ್ಗೆ ಪ್ರೀತಿಯಿಂದ ಕೇಳುವುದು ತಪ್ಪಲ್ಲ. ಆದರೆ ಬೆದರಿಕೆ ಹಾಕುವುದು ತಪ್ಪು. ಬೆದರಿಕೆ ಹಾಕುವುದಕ್ಕೆ ಬಿಜೆಪಿ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಸಿಗಲ್ಲ ಎಂದರು.

ಯಡಿಯೂರಪ್ಪ ನವರಿಗೆ ಸಿಎಂ ಸ್ಥಾನದಿಂದ ಇಳಿಸಿದರೆ ಬಿಜೆಪಿ ಸರ್ವನಾಶ ಆಗುತ್ತದೆ ಎಂದು ಸ್ವಾಮಿಗಳು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಯಾವ ಸ್ವಾಮಿಗಳು ಏನೂ ಬೇಕಾದರು ಯಾರ ಬಗ್ಗೆಯೂ ಪ್ರೀತಿಯಿಂದ ಹೇಳಬಹುದು ಎಂದರು.

ರಾಯಣ್ಣ ಬ್ರಿಗೇಡ್ ಮುಂದೆ ವರೆಸುವ ವಿಚಾರ ಕುರಿತು ಪ್ರತಿಕ್ರಿಯಿಸಿ, ರಾಯಣ್ಣ ಬ್ರಿಗೇಡ್ ಬಂದ್ ಮಾಡಿ ಎಂದು ಅಮೀತಾ ಶಾ ಅವರು ಕರೆದು ಹೇಳಿದ್ದಾರೆ. ಅದನ್ನು ನಾನು ಸಂಪೂರ್ಣವಾಗಿ ಕ್ಲೋಸ್ ಮಾಡಿದ್ದೇನೆ. ಅದನ್ನು ಯಾರು ಮುಂದೆ ವರೆಸುತ್ತಾರೋ ಗೊತ್ತಿಲ್ಲ. ನಾನಂತೂ ಆ ಕಡೆ ಹೋಗುವುದಿಲ್ಲ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss