ಅರ್ಜೆಂಟೀನಾ ವಿರುದ್ಧ ಗೆದ್ದಿ ಸೌದಿ ಅರೇಬಿಯಾಕ್ಕೆ ಒಲಿದ ಅದೃಷ್ಟ: ಆಟಗಾರರಿಗೆ ರೋಲ್ಸ್ ರಾಯ್ಸ್ ಗಿಫ್ಟ್ ಘೋಷಿಸಿದ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಫಿಫಾ ಫುಟ್‍ಬಾಲ್ ವಿಶ್ವಕಪ್‍ನಲ್ಲಿ ಅರ್ಜೆಂಟೀನಾ ವಿರುದ್ಧ ಗೆದ್ದಿದ್ದ ಸೌದಿ ಅರೇಬಿಯಾ ಆಟಗಾರರಿಗೆ ಸರ್ಕಾರದಿಂದ ದುಬಾರಿ ಗಿಫ್ಟ್ ಘೋಷಣೆಯಾಗಿದೆ.

ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ವಿರುದ್ಧ 2-1 ಗೋಲುಗಳ ಅಂತರದಿಂದ ಸೌದಿ ಅರೇಬಿಯಾ ಗೆದ್ದ ಬೆನ್ನಲ್ಲೇ ಸೌದಿ ಅರೇಬಿಯಾ ಸರಕಾರ ಗೆಲುವಿಗೆ ಕಾರಣರಾದ ಆಟಗಾರರಿಗೆ ದುಬಾರಿ ರೋಲ್ಸ್ ರಾಯ್ಸ್ (Rolls-Royce) ಫ್ಯಾಂಟಮ್ ಕಾರ್ ಉಡುಗೊರೆಯಾಗಿ ನೀಡುವುದಾಗಿ ತಿಳಿಸಿದೆ.

ಅರ್ಜೆಂಟೀನಾ ವಿರುದ್ಧ ಗೆದ್ದ ಬಳಿಕ ಸಂಭ್ರಮಾಚರಣೆಗಾಗಿ ಸೌದಿ ಅರೇಬಿಯಾ ಸರ್ಕಾರ ನ.23 ರಂದು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿತ್ತು. ಇದೀಗ ಆಟಗಾರರಿಗೆ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!