January17, 2026
Saturday, January 17, 2026
spot_img

ಗುಡ್‌ನ್ಯೂಸ್‌: ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಳದಿ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ಮಂಗಳವಾರ 6ನೇ ರೈಲು ಸೇರ್ಪಡೆಯಾಗಲಿದೆ

ಈ ರೈಲಿನ ಸೇರ್ಪಡೆಯೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಹೇಳಿದೆ.

ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ. ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Must Read

error: Content is protected !!