ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸಂಕಷ್ಟದಿಂದ ಕಂಗೆಟ್ಟಿರುವ ಕೇರಳದ ಜನತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುಡ್ ನ್ಯೂಸ್ ನೀಡಿದ್ದಾರೆ. ಎರಡು ತಿಂಗಳ ಕಾಲ ಬಾಕಿ ಇರುವ ವಿದ್ಯುತ್ ಹಾಗೂ ನೀರಿನ ಬಿಲ್ ವಸೂಲಿ ಮಾಡದಂತೆ ಆದೇಶಿಸಿದ್ದಾರೆ.
ಅಲ್ಲದೇ ಬ್ಯಾಂಕಿಂಗ್ ವಲಯವೂ ಕೂಡ ಸಾಲಗಾರರಿಂದ ಸಾಲ ವಸೂಲಿಗೆ ಇಳಿಯದಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇನ್ನೂ ಮನೆಯಿಂದ ಹೊರಹೋಗಲಾಗದ ಅಸಹಾಯಕರು ಪೊಲೀಸ್ ನಿಯಂತ್ರಣ ಕೊಟಡಿಗೆ ಕರೆ ಮಾಡುವ ಮೂಲಕ ಔಷಧಿಗಳನ್ನು ತರಿಸಿಕೊಳ್ಳಬಹುದಾಗಿದೆ. ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೂಲಕ ಕೋವಿಡ್ ಜಾಗೃತಿ ಮೂಡಸಲಿದ್ದಾರೆ ಎಂದು ವಿಜಯನ್ ತಿಳಿಸಿದ್ದಾರೆ.