ಹೊಸದಿಗಂತ ಡಿಜಿಟಲ್ ಡೆಸ್ಕ್
ಕಳೆದ ಎರಡು ತಿಂಗಳಿನಿಂದ ಬಾಕಿ ಇರುವ ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳ ವೇತನವನ್ನು ಜಿವಿಕೆ ಸಂಸ್ಥೆ ಬಿಡುಗಡೆ ಮಾಡಿದೆ.
ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿ, ಸ್ಥಗಿತದ ಎಚ್ಚರಿಕೆ ನೀಡಿತ್ತು. ಇದೀಗ ಜಿವಿಕೆಯಿಂದ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿದೆ.
ಇಂದು ಸಭೆಯಲ್ಲಿ ಮಾತನಾಡಿದ್ದ ಆಯುಕ್ತ ರಂದೀಪ್ ಎರಡು ತಿಂಗಳಿನಿಂದ ಬಾಕಿ ಇರುವ ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳ ವೇತನ ಬಿಡುಗಡೆ ಮಾಡಲಾಗುತ್ತದೆ, ವಾರದೊಳಗೆ ಬಾಕಿ ವೇತನ ಬಿಡುಗಡೆಗೆ ಜಿವಿಕೆ ಸಂಸ್ಥೆ ಒಪ್ಪಿಕೊಂಡಿದೆಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಣದೀಪ್ ಹೇಳಿದ್ದರು.