ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಹಲವು ಜನಪ್ರಿಯ ಯೋಜನೆಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಅವರು ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1000 ರೂ. – 1500 ರೂ.ಗಳಷ್ಟು ಗೌರವಧನ ಹೆಚ್ಚಳ ಮಾಡಲಾಗುವುದೆಂದು ತಿಳಿಸಿದ್ದಾರೆ.

ಇದೇ ವೇಳೆ ಅವರು ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ. ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹಕ ನೀಡಲಾಗುವುದು , ಇನ್ನೂ ಜಲಜೀವನ್ ಮಿಷನ್ ಯೋಜನೆಯಡಿ ಮುಂದಿನ ಎರಡು ವರ್ಷಗಳಲ್ಲಿ ತಲಾ 25 ಲಕ್ಷ ಮನೆಗಳಿಗೆ ನಳ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!