ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.
ಕಲಾವಿದರು ಮತ್ತು ಕಲೆಗಳಿಗೆ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಶಾಸನದ ಮೊತ್ತವನ್ನ 3,000ಕ್ಕೆ ಹೆಚ್ಚಿಸಲಾಗುತ್ತದೆ. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ಒಂದು ಕೋಟಿಯವರೆಗೂ ಅನುದಾನವನ್ನು ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.