ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್: ಇಂದೇ ಬಾಕಿ ವೇತನ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದು, ಇಂದೇ ವೇತನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ.

ಕಳೆದ 4 ತಿಂಗಳಿನಿಂದ ಸಂಬಳ ಆಗಿಲ್ಲ, ಬಹಳ ಸಮಸ್ಯೆಯಾಗುತ್ತಿದೆ. ಬೇಗ ವೇತನ ಬಿಡುಗಡೆ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ನಂತರ ಮಾತನಾಡಿದ ಸಿದ್ದರಾಮಯ್ಯ ಇಂದೇ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರವೇ ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!