ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಗೌರವ ಧನವನ್ನು ರೂ.1,000 ಹೆಚ್ಚಿಸಿ, ಆದೇಶಿಸಿದೆ.
ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.