ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಈ ಮೂಲಕ ದೀಪಾವಳಿಗೆ ರಾಜ್ಯ ಸರ್ಕಾರ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.
ದೊಡ್ಡ ಅಕ್ರಮ ನಡೆದ ಬಳಿಕ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ಈ ಹಿಂದೆ ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಇದಾದ ಬಳಿಕ ಹೈಕೋರ್ಟ್ ನೀಡಿದ್ದ ಸೂಚನೆಯ ಅನ್ವಯ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದ್ರೆ ಫಲಿತಾಂಶ ವಿಳಂಬವಾಗಿತ್ತು. ಇದರಿಂದ ರೊಚ್ಚಿಗೆದ್ದ ಅಭ್ಯರ್ಥಿಗಳು ಭಿಕ್ಷೆ ಬೇಡುವ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ರಕ್ತದಲ್ಲಿ ಪತ್ರ ಬರೆದು ಫಲಿತಾಂಶ ಪ್ರಕಟಿಸುಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.