ಹೊಸದಿಗಂತ ಡಿಜಿಟಲ್ ಡೆಸ್ಕ್:
ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶಿ ವನ್ಯಜೀವಿಗಳ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುಯಲ್ ಮೂಲಕ ಚಾಲನೆ ನೀಡಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿದರು.
ಮುಂಬರುವ ತಿಂಗಳಲ್ಲಿ ಜಾಗ್ವಾರ್, ಚಿಂಪಾಂಜಿ, ಕ್ಯಾಪಚೀನ್ ಕೋತಿ ಸೇರಿ 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸೇರ್ಪಡೆಯಾಗಲಿದೆ, ಜೊತೆಗೆ ಬೃಹತ್ ಮತ್ಯಾಗಾರ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮುಂದಿನ ನಾಲೈದು ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೇರಿಕದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ ಸೇರಿ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.
ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸು ತಿರುವುದರಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸಲು ಮೊದಲ ಬಾರಿಗೆ ಪ್ರಾಯೋ ಗಿಕವಾಗಿ ದೇಶದಲ್ಲೇ ಪ್ರಾಯೊಗಿಕವಾಗಿ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.