ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗರಿಗೆ ಸಿಹಿಸುದ್ದಿ ಇದಾಗಿದ್ದು,100 ಹೊಸ ಬಿಎಂಟಿಸಿ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಬಿಎಂಟಿಸಿಗೆ ಹೊಸದಾಗಿ 840 ಬಸ್ಗಳು ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ 100 ಹೊಸ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದರು.
ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ಗಳನ್ನು ಬಿಎಂಟಿಸಿ ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ಗಳನ್ನು ಆರಂಭಿಸುತ್ತಿದ್ದೇವೆ.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.