January21, 2026
Wednesday, January 21, 2026
spot_img

ಬೆಂಗಳೂರು ನಿವಾಸಿಗಳಿಗೆ ಸಿಹಿ ಸುದ್ದಿ: ಜಲಮಂಡಳಿಯಿಂದ ‘ಬಿಲ್ ಬಾಕಿ’ ಮುಕ್ತ ಅಭಿಯಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ನಿವಾಸಿಗಳಿಗೆ ಹೊಸ ವರ್ಷದ ಸಂಭ್ರಮವನ್ನು ಇಮ್ಮಡಿಗೊಳಿಸಲು ಬೆಂಗಳೂರು ಜಲಮಂಡಳಿ ಭರ್ಜರಿ ಕೊಡುಗೆಯೊಂದನ್ನು ಸಿದ್ಧಪಡಿಸಿದೆ. ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದ ಗ್ರಾಹಕರಿಗಾಗಿ ‘ಒನ್ ಟೈಮ್ ಸೆಟಲ್‌ಮೆಂಟ್’ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಹಸಿರು ನಿಶಾನೆ ನೀಡಿದೆ.

ಗ್ರಾಹಕರು ಬಾಕಿ ಇರುವ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ, ಅದರ ಮೇಲಿನ ಸಂಪೂರ್ಣ ಬಡ್ಡಿ ಮತ್ತು ದಂಡದ ಮೊತ್ತವನ್ನು ಮನ್ನಾ ಮಾಡಲಾಗುತ್ತದೆ.

ಗ್ರಾಹಕರ ಅನುಕೂಲಕ್ಕಾಗಿ ಜಲಮಂಡಳಿಯ ಅಧಿಕೃತ ವೆಬ್‌ಸೈಟ್ ಮತ್ತು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಆ್ಯಪ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಕಟ್ಟಡ ಹಾಗೂ ವಾಣಿಜ್ಯ ಮಳಿಗೆಗಳಿಗಾಗಿ ಜಲಮಂಡಳಿಯ ವಿಶೇಷ ತಂಡ ಭೇಟಿ ನೀಡಲಿದೆ. ವಸತಿ ಕಟ್ಟಡಗಳ ನಿವಾಸಿಗಳನ್ನು ಸ್ಥಳೀಯ ಅಧಿಕಾರಿಗಳು ಸಂಪರ್ಕಿಸಿ ಮಾಹಿತಿ ನೀಡಲಿದ್ದಾರೆ.

ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಮಾತನಾಡಿ, “ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಂತೆ ಈ ಜನಪರ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆಯ ಅಧಿಕೃತ ಚಾಲನೆ ಮತ್ತು ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು,” ಎಂದು ತಿಳಿಸಿದ್ದಾರೆ.

ಈ ಯೋಜನೆಯು ಸಾವಿರಾರು ಗ್ರಾಹಕರಿಗೆ ಆರ್ಥಿಕ ಹೊರೆ ತಗ್ಗಿಸಲಿದ್ದು, ಜಲಮಂಡಳಿಗೂ ಬಾಕಿ ಹಣ ವಸೂಲಿ ಮಾಡಲು ನೆರವಾಗಲಿದೆ.

Must Read