ಬಿಗ್ ಬಾಸ್ ಪ್ರಿಯರಿಗೆ ಗುಡ್ ನ್ಯೂಸ್: ಹೊಸ ಅಪ್ ಡೇಟ್ ನೀಡಿದ ಟೀಮ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಲರ್ಸ್‌ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ ಬಾಸ್‌’ ಯಾವಾಗ ಎನ್ನುವ ಪ್ರಶ್ನೆಗಳಿಗೆ ಶೀಘ್ರವೇ ಉತ್ತರ ಸಿಗುವ ನಿರೀಕ್ಷೆವಿದೆ. ಬಿಗ್ ಬಾಸ್ ಸೀಸನ್ 9 ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದ್ದು, ಆಗಸ್ಟ್‌ ಮೊದಲ ವಾರದಿಂದ ಆರಂಭವಾಗಲಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಈ ಬಾರಿಯ ಬಿಗ್ ಬಾಸ್ ಮತ್ತಷ್ಟು ವಿಶೇಷವಾಗಿ ಮೂಡಿಬರಲಿದ್ದು, ಕಳೆದ ಬಾರಿಯಂತೆ ಬಾರಿಯೂ ಸಹ ವೂಟ್ ಸೆಲೆಕ್ಟ್ ನಲ್ಲಿಯೂ ಬಿಗ್ ಬಾಸ್ ಪ್ರಸಾರವಾಗಲಿದೆ. ಓಟಿಟಿಯಲ್ಲಿ ಮತ್ತು ಕಲರ್ಸ್‌ ವಾಹಿನಿಯಲ್ಲಿ ಎರಡು ರೀತಿಯ ಬಿಗ್‌ ಬಾಸ್‌ ಸೀಸನ್‌ಗಳನ್ನು ಪ್ರಸಾರ ಮಾಡಲು ಕಲರ್ಸ್‌ ಸಂಸ್ಥೆ ನಿರ್ಧರಿಸಿದೆ.
ಬಿಗ್‌ ಬಾಸ್‌ ಟಿವಿಯಲ್ಲಿ ಪ್ರಸಾರ ಆರಂಭವಾಗುವ ಮೊದಲೇ ವೂಟ್‌ ಸೆಲೆಕ್ಟ್ ನಲ್ಲಿ ಬಿಗ್‌ ಬಾಸ್‌ ಮಿನಿ ಸೀಸನ್‌ ಪ್ರಸಾರವಾಗಲಿದೆ. ಈ ಮಿನಿ ಸೀಸನ್‌ 42 ದಿನಗಳ ಕಾಲ ಪ್ರಸಾರವಾಗಲಿದ್ದು, ಇಂಟರ್‌ನೆಟ್‌ ಸ್ಟಾರ್‌ಗಳು, ಇನ್‌ಫ್ಲುಯೆನ್ಸರ್‌ಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದಿನಿಂತೆ ಸುದೀಪ್‌ ವಾರದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಮಿನಿ ಸೀಸನ್‌ನಲ್ಲಿ ಆಯ್ಕೆಯಾದ ಒಂದಿಬ್ಬರು ಸ್ಪರ್ಧಿಯಲ್ಲಿ ವಾಹಿನಿಯಲ್ಲಿ ಪ್ರಸಾರವಾಗುವ ಪೂರ್ಣ ಪ್ರಮಾಣದ ಬಿಗ್‌ ಬಾಸ್‌ನಲ್ಲಿ ಭಾಗವಹಿಸುತ್ತಾರೆ. ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ಬಿಗ್‌ ಬಾಸ್‌ 90 ದಿನಗಳ ಕಾಲ ಪ್ರಸಾರವಾಗಲಿದೆ.

·

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!