Thursday, August 18, 2022

Latest Posts

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ದರದಲ್ಲಿ ಇಲ್ಲ ಏರಿಕೆ

ಹೊಸದಿಗಂತ ವರದಿ, ವಿಜಯಪುರ:

ಬಸ್ ದರ ಹೆಚ್ಚಳ ಮಾಡುವುದಿಲ್ಲ, ಸದ್ಯ ದರ ಹೆಚ್ಚಳದ ಪ್ರಸ್ತಾವನೆ ಇಲ್ಲವೇ ಇಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾದಲ್ಲಿ ಜನರು ತೊಂದರೆಯಲ್ಲಿದ್ದಾರೆ. ಕಳೆದ ವರ್ಷವೇ ಸಾರಿಗೆ ದರ ಹೆಚ್ಚಳ ಮಾಡಲಾಗಿದೆ. ಈಗ ದರ ಹೆಚ್ಚಳ ಮಾಡೋದಿಲ್ಲ. ದರ ಹೆಚ್ಚಳದ ಪ್ರಸ್ತಾವನೆ ಇಲ್ಲ ಎಂದರು.

ನನ್ನ ಜೀವನದಲ್ಲಿ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ. ಹಿಂದುತ್ವದ ಆಧಾರದ ಮೇಲೆ ರಾಜಕಾರಣ ಮಾಡಿದ್ದೇನೆ. ಬಿಜೆಪಿ ಸಿದ್ಧಾಂತ, ತತ್ವಗಳನ್ನು ಆಧಾರವಾಗಿ ಇಟ್ಟುಕೊಂಡಿದ್ದೇನೆ. ಪಕ್ಷ ಹೇಳಿದರೆ ಉತ್ತರ ಪ್ರದೇಶಕ್ಕೆ ಹೋಗಿ ಚುನಾವಣೆಗೂ ನಿಲ್ಲುತ್ತೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!