ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲುವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ.
ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ ಕ್ಷೇತ್ರಕ್ಕೆ ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ.
ಇದೀಗ ಈ ಬಗ್ಗೆ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆಯಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಈ ಮೂಲಕ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು (16575/16576) ಮತ್ತೆ ತನ್ನ ಸೇವೆ ಮುಂದುವರಿಸಲಿದೆ. ಇದೀಗ ಮೊದಲಿನಂತೆ ತನ್ನ ಸಂಚಾರವನ್ನು ಯಶವಂತಪುರ ನಿಲ್ದಾಣದಿಂದ ಆರಂಭಿಸಲಿದೆ. ಪ್ರಯಾಣಿಕರು ಈ ರೈಲ್ವೆ ಸಂಚಾರ ಸೇವೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಹೇಳಿದೆ.
ಕಳೆದ ಆರು ತಿಂಗಳಿನಿಂದ ರದ್ದಾಗಿದ್ದ ಈ ರೈಲು, ಇದೀಗ ಮತ್ತೆ ಪ್ರಾರಂಭವಾಗಿರುವುದು ಪ್ರಯಾಣಿಕರಲ್ಲಿ ಸಂಸತ ತಂದಿದೆ. ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ರದ್ದಾಗಿತ್ತು. ಇದೀಗ ಮತ್ತೆ ಸಂಚಾರಿಸುವ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲು ಸಿದ್ಧವಾಗಿದೆ. ಈ ಮೂಲಕ ನೈಋತ್ಯ ರೈಲ್ವೆ ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.
ಕರಾವಳಿ ಪ್ರವಾಸಿಗರಿಗೆ ಗುಡ್‌ನ್ಯೂಸ್: ಮತ್ತೆ ಶುರುವಾಯ್ತು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು

