ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕೊಬ್ಬರಿ ಬೆಳೆಗಾರರಿಗೆ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೆಚ್ಚುವರಿಯಾಗಿ 7500 ಮೆಟ್ರಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ವರ್ಷದಲ್ಲಿ 2999 ಮೆಟ್ರಿಕ್ ಟನ್ ಖರೀಸಲಾಗುತ್ತಿತ್ತು. ಆದ್ರೆ, ಹೆಚ್ಚುವರಿ ಖರೀದಿಸುವಂತೆ ಕೇಂದ್ರ ಸಚಿವ ಸೋಮಣ್ಣ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ 2024ನೇ ಸಾಲಿಗೆ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಒಪ್ಪಿಗೆ ಸೂಚಿಸಿದೆ. ಇದರಿಂದ ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ, ತುಮಕೂರು, ರಾಮನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರದಿಂದ ಈ ವರ್ಷದಲ್ಲಿ 2999 ಮೆಟ್ರಿಕ್ ಟನ್ ಖರೀಸಲಾಗುತ್ತಿತ್ತು. ಆದ್ರೆ, ರೈತರಿಗೆ ಅನಾನುಕೂಲವಾಗಲಿದೆ ಎಂದು ಅರಿತ ಕೇಂದ್ರ ರೈಲ್ವೆ ರಾಜ್ಯ ಖಾತೆ ವಿ ಸೋಮಣ್ಣ ಅವರು 10 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದರು. ಇದರಿಂದ 2999 ಮೆಟ್ರಿಕ್ ಟನ್ ಜೊತೆಗೆ ಹೆಚ್ಚುವರಿಯಾಗಿ 7500 ಮೆಟ್ರಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒಪ್ಪಿಗೆ ನೀಡಿದ್ದಾರೆ.
ಈ ಮೂಲಕ ಇದೀಗ ಕೇಂದ್ರ ಸರ್ಕಾರ ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿ ಖರೀದಸಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ತಮ್ಮ ಮನವಿಗೆ ತತಕ್ಷಣವಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.