ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಐದು ರಾಜ್ಯಗಳ ರೈತರಿಗೆ ಸಂತಸ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು,ತೆಂಗಿನಕಾಯಿಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗಿರಣಿ ಕೊಬ್ಬರಿ ಕ್ವಿಂಟಾಲ್ ಬೆಲೆ 11,582 ರೂಗೆ ಹಾಗೂ ಬಾಲ್ ಕೊಬ್ಬರಿ ಕ್ವಿಂಟಾಲ್ ಬೆಲೆ 12,100 ರೂ.ಗೆ ನಿಗದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇವುಗಳ ಬೆಲೆ 2014ಕ್ಕೆ ಹೋಲಿಸಿ ನೋಡೋದಾದರೆ 2014ರಲ್ಲಿ ಮಿಲ್ಲಿಂಗ್ ಕೋಪ್ರಾ ಕನಿಷ್ಠ ಬೆಂಬಲ ಬೆಲೆ 5250 ರೂಪಾಯಿ ಇತ್ತು. ಇದೀಗ ಕನಿಷ್ಠ ಬೆಂಬಲ ಬೆಲೆ ಶೇಕಡಾ 121 ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ಬಾಲ್ ಕೊಬ್ಬರಿ ಬೆಲೆ 2014ರಲ್ಲಿ 5500 ರೂಪಾಯಿ ಇತ್ತು. ಇದೀಗ ಕನಿಷ್ಠ ಬೆಂಬಲ ಬೆಲೆಯ ಶೇಕಡಾ 120ರಷ್ಟು ಏರಿಕೆ ಆಗಿದೆ.

ತೆಂಗು ಕೃಷಿ ವೆಚ್ಚ ಹೆಚ್ಚಳ ಹಾಗೂ ಕೊಬ್ಬರಿ ಮತ್ತು ತೆಂಗಿನ ಎಣ್ಣೆಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಮಾಡಿರುವ ಶಿಫಾರಸುಗಳಿಗೆ ಅನುಗುಣವಾಗಿ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸಲಾಗಿದೆ.

ಕೇಂದ್ರದ ಈ ನಿರ್ಧಾರದಿಂದ ತೆಂಗು ಹೆಚ್ಚು ಬೆಳೆಯುವ ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣದ ಐದು ರಾಜ್ಯಗಳ ರೈತರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ಆ ಮೂಲಕ ತೆಂಗು ರೈತರಲ್ಲಿ ಸಂತಸ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!