Wednesday, February 21, 2024

ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್: ಕೊಬ್ಬರಿ ಖರೀದಿಯ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ತೆಂಗು ಬೆಳೆಗಾರರಿಗೆ (Coconut Growers) ಕೇಂದ್ರ ಸರ್ಕಾರ(Central Government) ಬಂಪರ್ ಕೊಡುಗೆ ನೀಡಿದೆ. ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಇಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಮಿಲ್ಲಿಂಗ್‌ ಕೊಬ್ಬರಿ ಹಾಗೂ ಪೂರ್ಣ ಕೊಬ್ಬರಿಗೆ ಕ್ರಮವಾಗಿ ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಹಾಗೂ 250 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ(R Ashoka) ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಕೋರಿದ್ದಾರೆ.

ರೈತರ ಪರಿಶ್ರಮಕ್ಕೆ ನ್ಯಾಯ ಒದಗಿಸಲು, ಅನ್ನದಾತರ ಆದಾಯ ಹೆಚ್ಚಿಸಲು ಕೇಂದ್ರ ಬಿಜೆಪಿ ಸರ್ಕಾರ ಸದಾ ಬದ್ಧತೆ ತೋರಿದೆ. ರಾಜ್ಯದ ತೆಂಗು ಬೆಳೆಗಾರರ ಮನವಿಗೆ ಸ್ಪಂದಿಸಿದ ಪ್ರಧಾನಿ ಅವರಿಗೆ ಕೃತಜ್ಞತೆಗಳು ಎಂದು ಟ್ವೀಟ್​ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!