Monday, November 10, 2025

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್‌ ಸಂಚಾರಕ್ಕೆ ಸಿದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಇದೇ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗಿದೆ. ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ.

ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯ ಶೇ.90 ರಷ್ಟು ಕೆಲಸ ಪೂರ್ಣಗೊಂಡಿದೆ. ಮೇಲ್ಸೇತುವೆ ಮಧ್ಯಭಾಗದಲ್ಲಿ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಎರಡೂ ಕಡೆ ವೇಟ್ ಮಿಕ್ಸ್ ಹಾಕಿದ್ದು, ಡಾಂಬರೀಕರಣ ಮಾಡುವ ಕೆಲಸ ಮುಕ್ತಾಯ ಆಗಲಿದೆ.  

ಬಣ್ಣ ಬಳಿಯುವ ಕೆಲಸವೂ ಬಹುತೇಕ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಕೂಡಲೇ ಈ ವಾರ ವಾಹನಗಳ ಟ್ರಯಲ್ ರನ್ ಮಾಡಬೇಕಿದೆ. ಆ ಬಳಿಕ ಈ ವಾರದಲ್ಲಿ ದಿನಾಂಕವನ್ನು ನಿಗದಿಪಡಿಸಿ ಲೋಕಾರ್ಪಣೆ ಮಾಡಿ ವಾಹನ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯಿದೆ.

ಫ್ಲೈ ಓವರ್‌ ಉದ್ಘಾಟನೆಯಾದ ಬಳಿಕ ನಾಯಂಡನಹಳ್ಳಿಯಿಂದ ಬನಶಂಕರಿ ಮಾರ್ಗ, ಪಿಇಎಸ್ ಕಾಲೇಜ್ ರಸ್ತೆ ಸಂಚಾರ ದಟ್ಟಣೆ ಕಡಿಮೆ ಆಗಲಿದೆ.

error: Content is protected !!