ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕಿ ಸೇವೆ ಪುನರ್ ಆರಂಭಿಸಲಾಗಿದೆ.
ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್ಗಳಲ್ಲಿ ಮಾತ್ರ ಸೇವೆ ಲಭ್ಯವಿದೆ. ಸುರಕ್ಷತೆಯ ಕಾರಣಕ್ಕೆ ಜೂನ್ 16 ರಿಂದ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಿತ್ತು.
ಆ ಬಳಿಕ ಎಲ್ಲಾ ಬೈಕ್ ಟ್ಯಾಕ್ಸಿಗಳು ಸೇವೆ ಸ್ಥಗಿತಗೊಳಿಸಿದ್ದವು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್ ಟ್ಯಾಕ್ಸಿಗಳ ಮೇಲೆ ಆರ್‌ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು. ಭಾರಿ ದಂಡ ವಿಧಿಸಿದ್ದರಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳಿಗೆ ಸೂಚಿಸಲಾಗಿತ್ತು.