March 21, 2026
Saturday, March 21, 2026
spot_img

ನಿಗಮ-ಮಂಡಳಿ ಸಾರಥಿಗಳಿಗೆ ಗುಡ್‌ನ್ಯೂಸ್: ಸಚಿವ ಸ್ಥಾನಮಾನದ ಬೆನ್ನಲ್ಲೇ ಅವಧಿ ವಿಸ್ತರಣೆಯ ಭಾಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅಧಿಕಾರಾವಧಿಯನ್ನು ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇದರಿಂದಾಗಿ ಈಗಾಗಲೇ ಅವಧಿ ಮುಗಿದಿರುವ ಹಾಗೂ ಮುಕ್ತಾಯದ ಹಂತದಲ್ಲಿದ್ದ ಅಧ್ಯಕ್ಷರಿಗೆ ಮತ್ತಷ್ಟು ಕಾಲ ಅಧಿಕಾರದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಂತಾಗಿದೆ.

ಸರ್ಕಾರದ ವಿವಿಧ ಇಲಾಖೆಗಳ ಅಡಿಯಲ್ಲಿ ಬರುವ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ.

ಆಯಾ ಇಲಾಖೆಗಳ ನಿಯಮಾವಳಿಗಳ ಅನ್ವಯ, ಅಧ್ಯಕ್ಷರು ತಕ್ಷಣದಿಂದಲೇ ಕಾರ್ಯನಿರ್ವಹಿಸಲು ಪೂರಕವಾದ ಅಧಿಸೂಚನೆಯನ್ನು ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಉಪ ಕಾರ್ಯದರ್ಶಿ ಅಭಿಜಿನ್ ಬಿ. ಸೂಚಿಸಿದ್ದಾರೆ.

CADA ಮತ್ತು ವಿವಿಧ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನು ಕೈಬಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಹೊಸಬರ ನೇಮಕವಾಗುವವರೆಗೆ ಹಳಬರನ್ನೇ ಮುಂದುವರಿಸಬೇಕೆಂಬ ಅವರ ಆಗ್ರಹಕ್ಕೆ ಈಗ ಮನ್ನಣೆ ಸಿಕ್ಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !