ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟೂರ್ನಿ ಆರಂಭಕ್ಕೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

16ನೇ ಆವೃತ್ತಿ ಐಪಿಎಲ್ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 31 ರಂದು ಐಪಿಎಲ್ 2023 ಟೂರ್ನಿ ಆರಂಭಗೊಳ್ಳುತ್ತಿದೆ.

ಮಾರ್ಚ್ 31ರ ಸಂಜೆ 7.30ಕ್ಕೆ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಲಿದೆ. ಈ ಪಂದ್ಯ ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬಳಿಕ ಬೆಂಗಳೂರು, ಮುಂಬೈ, ಚೆನ್ನೈ ಸಹಿತ12 ನಗರದಲ್ಲಿ ಈ ಬಾರಿಯ ಐಪಿಎಲ್ ಟೂರ್ನಿ ಆಯೋಜನೆಗೊಂಡಿದೆ. ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ.

ಐಪಿಎಲ್ 2023 ಟೂರ್ನಿಯಲ್ಲಿ 70 ಲೀಗ್ ಪಂದ್ಯಗಳು ನಡೆಯಲಿದೆ. ಇನ್ನು 18 ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಪ್ರತಿ ತಂಡ 7 ಪಂದ್ಯವನ್ನು ತವರಿಲ್ಲಿ ಹಾಗೂ 7 ಪಂದ್ಯಗಳನ್ನು ತವರಿನಾಚೆ ಆಡಲಿದೆ. ಮೇ.21ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ. ಬಳಿಕ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭಗೊಳ್ಳಲಿದೆ.

ಗ್ರೂಪ್ ಎ: ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಖನೌ ಸೂಪರ್ ಜೈಂಟ್ಸ್
ಗ್ರೂಪ್ ಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಗುಜರಾತ್ ಟೈಟಾನ್ಸ್

ಐಪಿಎಲ್ ಆಯೋಜನೆಗೊಳ್ಳುವ ನಗರ
ಬೆಂಗಳೂರು, ಅಹಮ್ಮದಾಬಾದ್, ಮೊಹಾಲಿ, ಹೈದರಾಬಾದ್, ಚೆನ್ನೈ, ದೆಹಲಿ, ಕೋಲ್ಕತಾ, ಜೈಪುರ, ಮುಂಬೈ, ಗುವ್ಹಾಟಿ, ಧರ್ಮಶಾಲಾ

ಕಳೆದ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!