ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಹಾಗೂ ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ ವಿಪರೀಚತ ವಾದ ಹಿನ್ನಲೆಯಲ್ಲಿ ಬೀದಿನಾಯಿಗಳ ತೆರವಿಗೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಕೊನೆಗೂ ತನ್ನ ಆದೇಶವನ್ನು ಸಡಿಲಿಸಿದ್ದು, ಸಂತಾನಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಬಹುದು ಎಂದು ಹೇಳಿದೆ.
ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.
ಈ ನಿರ್ದೇಶನದ ವಿರುದ್ಧ ಶ್ವಾನ ಪ್ರಿಯರು ಮತ್ತು ಪ್ರಾಣಿ ಸಂಘಟನೆಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಬೀದಿ ನಾಯಿಗಳಿಗೆ ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠವು, ನ್ಯಾಯಾಲಯದ ಹಿಂದಿನ ಆದೇಶವನ್ನು ಪರಿಶೀಲಿಸಿ, ಈ ವಿಷಯದ ವ್ಯಾಪ್ತಿಯನ್ನು ವಿಸ್ತರಿಸಿತು ಮತ್ತು ಹೈಕೋರ್ಟ್‌ಗಳ ಮುಂದೆ ಬಾಕಿ ಇರುವ ಎಲ್ಲಾ ರೀತಿಯ ವಿಷಯಗಳನ್ನು ಅಂತಿಮ ರಾಷ್ಟ್ರೀಯ ನೀತಿಗಾಗಿ ಉನ್ನತ ನ್ಯಾಯಾಲಯಕ್ಕೆ ವರ್ಗಾಯಿಸಲು ಆದೇಶಿಸಿತು.
ಪುರಸಭೆ ಅಧಿಕಾರಿಗಳು ಪ್ಯಾರಾ 12, 12.1 ಮತ್ತು 12.2 ಅನ್ನು ಪಾಲಿಸಬೇಕು, ಬೀದಿ ನಾಯಿಗಳನ್ನು ಬಿಡುವುದನ್ನು ನಿಷೇಧಿಸುವುದನ್ನು ತಡೆಹಿಡಿಯಲಾಗುತ್ತದೆ. ಅವುಗಳಿಗೆ ಜಂತುಹುಳು ನಿವಾರಕ, ಸಂತಾನ ಹರಣ ಲಸಿಕೆ ಇತ್ಯಾದಿಗಳನ್ನು ನೀಡಲಾಗುತ್ತದೆ. ಬಳಿಕ ಮತ್ತದೇ ಅದೇ ಪ್ರದೇಶಕ್ಕೆ ಹಿಂತಿರುಗಿಸಲಾಗುತ್ತದೆ. ಆಕ್ರಮಣಕಾರಿ ನಡವಳಿಕೆ ಅಥವಾ ರೇಬೀಸ್ ಇರುವ ನಾಯಿಗಳಿಗೆ ಲಸಿಕೆ ನೀಡಲಾಗುತ್ತದೆ. ಅಂತಹ ರೋಗ ಪೀಡಿತ ನಾಯಿಗಳನ್ನು ಬೀದಿಗಳಲ್ಲಿ ಬಿಡದೇ ಆಶ್ರಯ ತಾಣಗಳಿಗೆ ರವಾನಿಸಬೇಕು ಎಂದು ನ್ಯಾಯಮೂರ್ತಿ ನಾಥ್ ಹೇಳಿದರು.