Monday, December 4, 2023

Latest Posts

ಅಭಿಮಾನಿಗಳಿಗೆ ಗುಡ್ ನ್ಯೂಸ್: ’ಕಾಂತಾರ 2′ ಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ನಟಿಸಿದ ‘ಕಾಂತಾರ’ ವಿಶ್ವದಲ್ಲಿ ಕಮಾಲ್ ಮಾಡಿದ್ದು ಹಳೆ ವಿಷಯ . ಆದ್ರೆ ಇದೀಗ ‘ಕಾಂತಾರ’ ಪಾರ್ಟ್ 2 ಯಾವಾಗ ಬರುತ್ತೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಈಗಾಗಲೇ ರಿಷಬ್ ಶೆಟ್ಟಿ ಸಿನಿಮಾ ಕೆಲಸ ಶುರು ಮಾಡಿದ್ದು , ಇದೀಗ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ.

ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!