ಅಭಿಮಾನಿಗಳಿಗೆ ಗುಡ್ ನ್ಯೂಸ್: ‘ಪುಷ್ಪ 2’ ಬಿಡುಗಡೆಗೂ ಮುನ್ನ ‘ಪುಷ್ಪ’ ರೀ-ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

021ರಲ್ಲಿ ಬಿಡುಗಡೆಯಾಗಿದ್ದ ‘ಪುಷ್ಪ’ ಸಿನಿಮಾಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಿತ್ತು. ತೆಲುಗಿನ ಆ ಚಿತ್ರ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆಕಂಡಿತ್ತು. ವಿಶೇಷವಾಗಿ, ಹಿಂದಿ ಪ್ರೇಕ್ಷಕರು ‘ಪುಷ್ಪ’ ಸಿನಿಮಾವನ್ನು ಸಖತ್ ಮೆಚ್ಚಿಕೊಂಡಿದ್ದರು. ಬಳಿಕ ಒಟಿಟಿ ಮತ್ತು ಟಿವಿಯಲ್ಲಿ ಪ್ರಸಾರ ಆದಾಗಲೂ ಜನರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಆ ಸಿನಿಮಾ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಗಲಿದೆ. ‘ಪುಷ್ಪ 2’ ಬಿಡುಗಡೆ ಹೊಸ್ತಿಲಿನಲ್ಲಿ ‘ಪುಷ್ಪ’ ಚಿತ್ರವನ್ನು ರೀ-ರಿಲೀಸ್ ಮಾಡಲು ನಿರ್ಧರಿಸಲಾಗಿದೆ.

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಪುಷ್ಪ’ ಸಿನಿಮಾದ ಸೀಕ್ವೆಲ್ ಆಗಿ ‘ಪುಷ್ಪ 2’ ಸಿನಿಮಾ ಸಿದ್ಧವಾಗಿದೆ. ಡಿಸೆಂಬರ್​ 5ರಂದು ‘ಪುಷ್ಪ 2’ ಬಿಡುಗಡೆ ಆಗಲಿದೆ. ಪ್ರೇಕ್ಷಕರಿಗೆ ಈ ಕಥೆ ಮತ್ತೊಮ್ಮೆ ನೆನಪಿಸಬೇಕು ಎಂಬ ಕಾರಣಕ್ಕೆ ‘ಪುಷ್ಪ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲಾಗುತ್ತಿದೆ. ಮರು ಬಿಡುಗಡೆಯಿಂದ ಚಿತ್ರಕ್ಕೆ ಎಷ್ಟು ಕಲೆಕ್ಷನ್ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!