ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೂಟಿಂಗ್‌ ಮುಗಿಸಿದ ʻಸಪ್ತಸಾಗರದಾಚೆ ಎಲ್ಲೋʼ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಯಾಂಡಲ್ ವುಡ್ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅವರು ʻಸಪ್ತಸಾಗರದಾಚೆ ಎಲ್ಲೋʼ ಚಿತ್ರದ ಶೂಟಿಂಗ್‌ ಮುಗಿಸಿ, ತೆರೆಗ ಮೇಲೆ ಅಬ್ಬರಿಸಲು ಸಿನಿಮಾ ರೆಡಿಯಾಗಿದೆ.

ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.

ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಚಿತ್ರತಂಡ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಪ್ರೊಡಕ್ಷನ್ ವರ್ಕ್ ಶುರು ಮಾಡಿದೆ.

`ಕವಲು ದಾರಿ’ (Kavaludari) ಚಿತ್ರದ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನಮಾಡಿದ್ದಾರೆ .

ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ.

ಇದೀಗ `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!