ರೈತರಿಗೆ ಸಿಹಿ ಸುದ್ದಿ: ಮತ್ತೆ ಕೃಷಿಭಾಗ್ಯ ಯೋಜನೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮತ್ತೆ ಕೃಷಿಭಾಗ್ಯ ಯೋಜನೆಯನ್ನು ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಕೃಷಿಭಾಗ್ಯ ಯೋಜನೆಯನ್ನು ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡರು.

2023-24ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕಿನ 100 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ಪ್ರಧಾನ ಮಂತ್ರಿ ಕೃಷಿ ಸಿಂಚನ ಯೋಜನೆಯನ್ನು 5 ತಾಲೂಕಿನಲ್ಲಿ ಜಾರಿಗೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.ಭಾಗ್ಯ ಯೋಜನೆ ಮತ್ತೆ ಪ್ರಾರಂಭಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!