ರೈತರಿಗೆ ಕೇಂದ್ರ ಸಿಹಿ ಸುದ್ದಿ: ಮೇ 31ಕ್ಕೆ ಪಿಎಂ ಕಿಸಾನ್‌ ಯೋಜನೆಯ 11ನೇ ಕಂತು ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಯೋಜನೆಯ 11ನೇ ಕಂತನ್ನು ಮೇ 31ರೊಳಗೆ, ರೈತರ ಖಾತೆಗೆ 21,000 ಕೋಟಿ ರೂಪಾಯಿಗಳನ್ನು ಜಮಾ ಮಾಡುವುದಾಗಿ ಪ್ರಧಾನಿ ಮಂತ್ರಿ ಕಾರ್ಯಾಲಯ ಶನಿವಾರ ಈ ವಿಷಯವನ್ನು ಬಹಿರಂಗಪಡಿಸಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಹದಿನಾರು ಸಚಿವಾಲಯಗಳು ಮತ್ತು ಇಲಾಖೆಗಳ ಚಟುವಟಿಕೆಗಳನ್ನು ವಿವರಿಸಲಾಗುವುದು. 31ರಂದು ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ ಎಂಬ ರಾಷ್ಟ್ರಮಟ್ಟದ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತ ಫಲಾನುಭವಿಗಳೊಂದಿಗೆ ಮಾತನಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ದೇಶದಾದ್ಯಂತ ಸಣ್ಣ ಮತ್ತು ಮಧ್ಯಮ ರೈತರಿಗೆ ʻಬೆಳೆ ಬಂಡವಾಳ ಸಹಾಯದʼ ಅಡಿಯಲ್ಲಿ ಕೇಂದ್ರ ಸರ್ಕಾರವು ವರ್ಷಕ್ಕೆ ಮೂರು ಹಂತಗಳಲ್ಲಿ 6,000 ರೂ ಜಮಾ ಮಾಡಲಿದ್ದಾರೆ. ಈ ವರ್ಷದ ಎರಡನೇ ಕಂತನ್ನು ಕೂಡಾ ಪ್ರಧಾನಿಯವರು ಬಿಡುಗಡೆ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಲವು ಫಲಾನುಭವಿಗಳೊಂದಿಗೆ ಪ್ರಧಾನಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರವು ಡಿಸೆಂಬರ್ 2018 ರಲ್ಲಿ ಪ್ರಾರಂಭಿಸಿತು. ದೇಶದ ಸಣ್ಣ ಮತ್ತು ಮಧ್ಯಮ ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ವಾರ್ಷಿಕ 6 ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಈಗಾಗಲೇ ಹತ್ತು ಕಂತುಗಳಲ್ಲಿ ಕೇಂದ್ರ ರೈತರ ಖಾತೆಗೆ 2000 ರೂ ಜಮಾ ಮಾಡಿದೆ. ಇಲ್ಲಿಯವರೆಗೆ ರೈತರ ಕಲ್ಯಾಣಕ್ಕಾಗಿ ಪಿಎಂ-ಕಿಸಾನ್ ಯೋಜನೆಯಡಿ 1.80 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

11 ನೇ ಕಂತಿನ ಭಾಗವಾಗಿ ಇ-ಕೆವೈಸಿ ನೀತಿಯನ್ನು ಜಾರಿಗೆ ತರಲಾಗಿದೆ. ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಕೇಂದ್ರವು ಈ ನೀತಿಯನ್ನು ಜಾರಿಗೆ ತರುತ್ತಿದೆ ಇದರಿಂದ ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವ ವ್ಯವಸ್ಥೆ ಆಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!