ಮಹಿಳಾ ಉದ್ಯೋಗಿಗಳಿಗೆ ಗುಡ್‌ ನ್ಯೂಸ್‌: ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಇದನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಅನುಷ್ಠಾನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು.

ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಇದನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎನ್ನಲಾಗಿದೆ. ಆರಂಭಿಕ ಹಂತವಾಗಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮ ಅನುಸರಿಸಲಾಗಿದೆ.

ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು.

ಬಿಹಾರವು 1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿದ್ದು, ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಕೆಲವು ರೀತಿಯ ಮುಟ್ಟಿನ ರಜೆಯನ್ನು ಸಹ ಹೊಂದಿವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮಟ್ಟಿನ ರಜೆಗಳನ್ನು ನೀಡುತ್ತವೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!