ಕೇರಳದಲ್ಲಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಋತುಚಕ್ರ ರಜೆ ಘೋಷಿಸಿದ ಪಿಣರಾಯಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರ (Periods Leave) ದ ರಜೆ ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ.

ದೇಶದಲ್ಲಿ ಮೊದಲ ಬಾರಿಗೆ ಇಂತದೊಂದು ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ (Pinarayi Vijayan) ತೆಗೆದುಕೊಂಡಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಆದೇಶ ಬಂದ ಬೆನ್ನಲ್ಲೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ನಿಯಮ ಜಾರಿ ಮಾಡಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ, ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ ಮತ್ತು ಪ್ರಸ್ತುತ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!