ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗಾಗಲೇ ವಿವಿಧ ಭಾಷೆಯಲ್ಲಿ ಸಿನಿಮಾವನ್ನು ಬಿಡುಗಡೆಗೊಳಿಸಿದ್ದಾರೆ. ಇದೀಗ ಇಂಗ್ಲಿಷ್ ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.
ʻಕಾಂತಾರʼ ಇಂಗ್ಲೀಷ್ ಭಾಷೆಗೆ ಡಬ್ ಆಗಿ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮ್ ಆಗಲಿದೆ. ಎಲ್ಲಾ ಭಾಷೆಯ ಪ್ರೇಕ್ಷಕರನ್ನ ಸೆಳೆಯುತ್ತಿರುವ ಕಾಂತಾರ ಈಗ ಈ ಮೂಲಕ ವಿದೇಶಿಗರನ್ನು ಸೆಳೆಯಲು ಮುಂದಾಗಿದೆ. ಇನ್ನೂ ʻಕಾಂತಾರʼ ಇಂಗ್ಲಿಷ್ ವರ್ಷನ್ ಜನವರಿಯಿಂದ ನೆಟ್ಫ್ಲಿಕ್ಸ್ನಲ್ಲಿ ರಿಲೀಸ್ ಆಗಲಿದೆ.
ಈ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿತ್ತು. ತುಳು ಭಾಷೆಯನ್ನು ಹೇಗೆ ಇಂಗ್ಲಿಷ್ನಲ್ಲಿ ಡಬ್ ಮಾಡುತ್ತಾರೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹೆಚ್ಚಿಸಿದೆ.