ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ಇಲಾಖೆಯ ಭವಿಷ್ಯ ನಿಜವಾಗಿದ್ದು, ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆಗಳಲ್ಲಿ ಇಳೆಗೆ ಮಳೆ ತಂಪೆರೆದಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಇಂದು ಬೆಳಗ್ಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರ್, ತಲಪಾಡಿ, ಮಲ್ಲೂರು, ಕಿನ್ಯಾಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಉಡುಪಿ ಜಿಲ್ಲೆಯ ಉಳಿಯಾರಗೋಳಿಯಲ್ಲಿಯೂ ಮಳೆ ಸುಡುಬಿಸಿಲಿಗೆ ತಂಪೆರೆದಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಭವಿಷ್ಯ ನಿಜವಾಗಿದೆ.