April 11, 2026
Saturday, April 11, 2026
spot_img

ಜಿಮ್‌ ಪ್ರಿಯರಿಗೆ ಸಿಹಿಸುದ್ದಿ, ಫೇವರೆಟ್‌ ಪ್ರೋಟೀನ್‌ ಮೊಟ್ಟೆ ದರದಲ್ಲಿ ಭಾರೀ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಜಿಮ್‌ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದ್ದು, ಮೊಟ್ಟೆ ರೇಟ್‌ನಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಈಮೊದಲು ಒಂದು ಮೊಟ್ಟೆಗೆ ಏಳು ರೂಪಾಯಿ ದರ ಇತ್ತು. ಇದೀಗ ಮೊಟ್ಟೆ ಬೆಲೆ ಒಂದಕ್ಕೆ ರೂ.4.60ಕ್ಕೆ ಇಳಿಕೆಯಾಗಿದ್ದು ಗ್ರಾಹಕರಿಗೆ ಖುಷಿಯಾಗಿದೆ.

ಹಬ್ಬದ ಸಮಯ ಇರುವ ಕಾರಣ ಬೇಡಿಕೆ ಕುಸಿತ, ಬೇಸಿಗೆಯಲ್ಲಿ ಮೊಟ್ಟೆ ತಿನ್ನುವವರ ಸಂಖ್ಯೆಯಲ್ಲಿ ಇಳಿಕೆ ಹಾಗೂ ರಫ್ತಿನಲ್ಲಿ ವ್ಯತ್ಯಯವಾಗಿರುವ ಕಾರಣ ದರ ಇಳಿಕೆ ಆಗಿದೆ. ಇದು ಕೋಳಿ ಸಾಕಾಣಿಕೆದಾರರಲ್ಲಿ ಆತಂಕ ಮೂಡಿಸಿದೆ.

ರಾಜ್ಯದವಲ್ಲಿ ಪ್ರತಿದಿನ ಸುಮಾರು 2.2 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ಈ ಮೊಟ್ಟೆಗಳ ಒಂದು ಭಾಗವನ್ನು ತಮಿಳುನಾಡಿನ ನಾಮಕ್ಕಲ್ ಕೇಂದ್ರಕ್ಕೆ ಕಳುಹಿಸಿ ಅಲ್ಲಿಂದ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಸಾಮಾನ್ಯವಾಗಿ ನಾಮಕ್ಕಲ್ ನಿಂದ ದಿನಕ್ಕೆ ಸುಮಾರು 70 ಲಕ್ಷದಿಂದ 1 ಕೋಟಿ ಮೊಟ್ಟೆಗಳು ಗಲ್ಫ್ ದೇಶಗಳಿಗೆ ಸಾಗುತ್ತವೆ.

ಆದರೆ, ಯುದ್ಧ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆಗಳ ಸಂಗ್ರಹ ಹೆಚ್ಚಾಗಿದೆ ಎನ್ನಲಾಗಿದ್ದು, ಇದೂ ಕೂಡ ಬೆಲೆ ಕುಸಿತಕ್ಕೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !