ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ-ಬೆಂಗಳೂರು ಮಧ್ಯ ಸಂಚರಿಸುವ ವಂದೇ ಭಾರತ ರೈಲಿಗೆ ಹಾವೇರಿಯಲ್ಲಿ ನಿಲುಗಡೆ ನೀಡಲು ರೈಲ್ವೆ ಇಲಾಖೆ ಆದೇಶ ನೀಡಿದೆ ಎಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಹಲವು ದಿನಗಳಿಂದ ಹಾವೇರಿ ಭಾಗದ ಜನರ ಬೇಡಿಕೆ ಇತ್ತು. ಈ ಬೇಡಿಕೆ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗಿದೆ. ಟ್ರಯಲ್ ಆಧಾರದ ಮೇಲೆ ಸದ್ಯ ನಿಲುಗಡೆ ಇರಲಿದೆ. ನಿಲ್ದಾಣದಲ್ಲಿ ಮಾತ್ರ ಟಿಕೆಟ್ ದೊರೆಯುತ್ತದೆ. ಜನಸ್ಪಂದನೆ ನೋಡಿಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸದ್ಯ ಇದು ಟ್ರಾಯಲ್ ಬೇಸಿಸ್ ಆಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದರೆ ಕಾಯಂ ಮಾಡುತ್ತಾರೆ. ಈ ರೈಲು ನಿಲುಗಡೆಯ ಉದ್ಘಾಟನೆ ದಿನಾಂಕವನ್ನು ಶೀಘ್ರವೇ ನಿಗದಿ ಮಾಡುತ್ತಾರೆ. ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಯಾಗಿಸುವಲ್ಲಿ ಯಶಸ್ಸಿಯಾದ ಹಾವೇರಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾವೇರಿಯ ಜನತೆ ವಂದೇ ಭಾರತ ರೈಲನ್ನು ಹೆಚ್ಚು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.