ಹೋಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ತಿಂಡಿ ದರ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಹೋಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ ಇದ್ದು, ಸದ್ಯಕ್ಕೆ ಊಟ, ತಿಂಡಿ ದರ ಹೆಚ್ಚಿಸುವುದಿಲ್ಲ ಎಂದು ಸೋಮವಾರ ಬೆಂಗಳೂರು ಹೋಟೆಲ್ ಮಾಲೀಕರ ಸಂಘ (Bangalore Hotels Association) ತಿಳಿಸಿದೆ.

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ಹೋಟೆಲ್​ ಮಾಲೀಕರ ಸಂಘ, ಊಟ, ತಿಂಡಿ ದರ ಹೆಚ್ಚಳ ಮಾಡದಿರಲು ತೀರ್ಮಾನಿಸಿದೆ.

ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಪಿಸಿ ರಾವ್ , ಸದ್ಯಕ್ಕೆ ಹೋಟೆಲ್ ಊಟ, ತಿಂಡಿ ದರ ಏರಿಕೆ ಇಲ್ಲ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಚುನಾವಣೆ ಮುಗಿಯುವ ವರೆಗೂ ಆಹಾರದ ಬೆಲೆ ಹೆಚ್ಚಳ ಮಾಡದಿರಲು ತೀರ್ಮಾನಿಸಿದ್ದೇವೆ. ಜತೆಗೆ, ಗ್ಯಾಸ್ ದರ ಇಳಿಕೆ ಮಾಡುವಂತೆ ಕೇಂದ್ರದ ಮೇಲೆ‌ ಒತ್ತಡ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ. ಎಲ್​ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಲವು ಹೋಟೆಲ್ ಮಾಲಿಕರಿಗೆ ಭಾರೀ ಹೊಡೆತ ಬಿದ್ದಿದೆ. ಊಟ, ತಿಂಡಿ, ಕಾಫಿ, ಟೀ ದರ ತುಂಬಾ ಕಡಿಮೆ ಇದ್ದು ಅವರು ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ತೀರಾ ನಷ್ಟವಾಗುತ್ತಿದ್ದರೆ ಶೇ 10ರ ದರ ಹೆಚ್ಚಳ ಮಾಡುವುದಕ್ಕೆ ಒಪ್ಪಿಗೆಯನ್ನೂ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!