June 5, 2026
Friday, June 5, 2026
spot_img

ಹೊಟೇಲ್ ಮಾಲೀಕರಿಗೆ ಗುಡ್‌ ನ್ಯೂಸ್‌ | ಹೆಚ್ಚುವರಿ 1 ಸಾವಿರ ಸಿಲಿಂಡರ್ ಪೂರೈಕೆ: ಕೆ.ಹೆಚ್. ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ಸಮಸ್ಯೆಗೆ ಪರಿಹಾರವಾಗಿ ಹೆಚ್ಚುವರಿ ಸಿಲಿಂಡರ್ ಪೂರೈಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಹೊಟೇಲ್ ಸೇರಿದಂತೆ ವಿವಿಧ ವಲಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಗ್ಯಾಸ್ ಕಂಪನಿಗಳು ಹಾಗೂ ಹೊಟೇಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ಪೂರೈಕೆ ಆಗುತ್ತಿರುವ ಸಿಲಿಂಡರ್‌ಗಳಿಗೆ ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಸೇರಿಸಲಾಗುತ್ತದೆ ಎಂದರು. ಇದರಿಂದ ಒಟ್ಟು 10,000 ಸಿಲಿಂಡರ್‌ಗಳ ವಿತರಣೆ ನಡೆಯಲಿದೆ.

ಇದನ್ನೂ ಓದಿ:

ಈ ಸೌಲಭ್ಯವನ್ನು ಪಡೆಯಲು ಎಲ್ಲ ಕಮರ್ಷಿಯಲ್ ಬಳಕೆದಾರರು GAILನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಒಂದು ವಾರದೊಳಗೆ ನೋಂದಣಿ ಪೂರ್ಣಗೊಳಿಸದಿದ್ದರೆ ಗ್ಯಾಸ್ ಪೂರೈಕೆ ಸಿಗುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕ್ರಮದಿಂದ ಅಕ್ರಮ ಬಳಕೆ ತಡೆಹಿಡಿಯಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

ಹೊಟೇಲ್, ಡಾಬಾ, ಪಿಜಿ, ಹಾಸ್ಟೆಲ್ ಹಾಗೂ ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ವಲಯಗಳಿಗೆ ಈ ಸಿಲಿಂಡರ್ ಹಂಚಿಕೆ ಆಗಲಿದೆ. ಈ ಬಗ್ಗೆ ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಇದಲ್ಲದೆ, ವಿದ್ಯುತ್ ದರ ಕಡಿತದ ಕುರಿತ ಮನವಿಯನ್ನು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ಸಚಿವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !