Tuesday, June 28, 2022

Latest Posts

IPL ಅಭಿಮಾನಿಗಳಿಗೆ ಗುಡ್​ ನ್ಯೂಸ್: ವೇಳಾಪಟ್ಟಿ ಪ್ರಕಟಿಸಿದ BCCI

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಪಿಎಲ್ ನ 14 ನೇ ಆವೃತ್ತಿಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಬಾಕಿ ಉಳಿದ ಐಪಿಎಲ್ ಪಂದ್ಯಗಳು ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 15 ರಂದು ಫೈನಲ್ ಪಂದ್ಯ ನಡೆಯಲಿದೆ.
ಯುಎಇ ನಲ್ಲಿ ನಡೆಯಲಿರುವ ವಿವೋ ಐಪಿಎಲ್ 2021 ರ ಉಳಿದ ವೇಳಾಪಟ್ಟಿಯನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ಒಟ್ಟು 31 ಪಂದ್ಯಗಳನ್ನು 27 ದಿನಗಳ ಅವಧಿಯಲ್ಲಿ ನಡೆಸಲಾಗುವುದು.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ವರ್ಷ ಮೇ ತಿಂಗಳಲ್ಲಿ ಮುಂದೂಡಲ್ಪಟ್ಟ 14 ನೇ ಸೀಸನ್ ಸೆಪ್ಟೆಂಬರ್ 19 ರಂದು ದುಬೈನಲ್ಲಿ ಪುನರಾರಂಭಗೊಳ್ಳಲಿದ್ದು, ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ ಎಂದು ವರದಿಯಾಗಿದೆ.
ಸದ್ಯ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನ ಅಲಂಕರಿಸಿದರೆ, ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದೆ. ಹಾಗೆಯೇ ಮೂರನೇ ಸ್ಥಾನವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಲಂಕರಿಸಿದೆ. ಇನ್ನು ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನದಲ್ಲಿದೆ.
ಒಟ್ಟಾರೆಯಾಗಿ, 13 ಪಂದ್ಯಗಳು ದುಬೈನಲ್ಲಿ, 10 ಶಾರ್ಜಾದಲ್ಲಿ ಮತ್ತು 8 ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿದೆ.1 ನೇ ಕ್ವಾಲಿಫೈಯರ್ ಅಕ್ಟೋಬರ್ 10 ರಂದು ದುಬೈನಲ್ಲಿ ನಡೆಯಲಿದೆ. ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಅನ್ನು ಕ್ರಮವಾಗಿ ಅಕ್ಟೋಬರ್ 11 ಮತ್ತು 13 ರಂದು ಶಾರ್ಜಾದಲ್ಲಿ ನಡೆಸಲಾಗುವುದು. ಅಕ್ಟೋಬರ್ 15 ರಂದು ದುಬೈನಲ್ಲಿ ಈ ವರ್ಷದ ವಿವೋ ಐಪಿಎಲ್ 2021 ರ ಫೈನಲ್ ಪಂದ್ಯ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss