ಚಿನ್ನಾಭರಣ ಪ್ರಿಯರಿಗೆ ಸಿಕ್ತು ಗುಡ್ ನ್ಯೂಸ್.. ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡಿದೆ. ಗ್ರಾಮ್​​ಗೆ 4ರಿಂದ 6ರೂವರೆಗೆ ಬೆಲೆ ಇಳಿದಿದೆ. ಆಭರಣ ಚಿನ್ನದ ಬೆಲೆ 5 ರೂ ಇಳಿಕೆ ಕಂಡಿದೆ.

9,235 ರೂ ಇದ್ದ ಸ್ವರ್ಣ ಬೆಲೆ ಈಗ 9,230 ರೂಗೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲೂ ಹೆಚ್ಚಿನ ವ್ಯತ್ಯಯವಾಗಿಲ್ಲ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,300 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,690 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,300 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರೂಪಾಯಿಯಲ್ಲಿ ಇದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!