October 17, 2026
Saturday, October 17, 2026
spot_img

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮೂರು ವರ್ಷ ವಯೋಮಿತಿ ಸಡಿಲಿಕೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ದಸರಾ ಬಂಪರ್ ಗಿಫ್ಟ್ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.

ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಇತ್ತೀಚೆಗೆ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು 5 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದರ ಮಧ್ಯೆ ಇದೇ ತಿಂಗಳ 6ರಂದು ರಾಜ್ಯ ಸರ್ಕಾರ ಸಿವಿಲ್ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು. ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ.

ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

ವಯೋಮಿತಿ ಸಡಿಲಿಕೆ ಎಷ್ಟು?

ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ

ಒಬಿಸಿ – 38 ವರ್ಷದಿಂದ 41 ವರ್ಷ

ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

Must Read