ಮಹಿಳಾಮಣಿಗಳಿಗೆ ಗುಡ್‌ ನ್ಯೂಸ್‌, ಎರಡು ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನವರಾತ್ರಿ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್‌ನಲ್ಲಿ ಜಮೆಯಾಗಲಿದೆ.

ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌  ಇದೇ ಅ.7 ಮತ್ತು 9 ರಂದು ಎರಡೂ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು.

ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!